Saturday, May 18, 2024
Homeಅಪರಾಧಶಿರಾಡಿ : ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ!

ಶಿರಾಡಿ : ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ!

spot_img
- Advertisement -
- Advertisement -

ಕಡಬ : ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಡಬ ತಾಲೂಕಿನ ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ತೋಮಸ್,, ಎಡಪ್ಪಾಟ್ ನಿವಾಸಿ ಇ.ಪಿ ವರ್ಗಿಸ್, ಪೇರಮಜಲು ನಿವಾಸಿ ಶೀನಪ್ಪ ಬಂಧಿತ ಆರೋಪಿಗಳು.

ರಬ್ಬರ್ ಹೇರಿಕೊಂಡಿದ್ದ ಲಾರಿಯನ್ನು ರಾತ್ರಿ ವೇಳೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಿಲ್ಲಿಸಲಾಗಿತ್ತು.ನಿಲ್ಲಿಸಿದ್ದಲಾರಿ ಮೇಲೆ ಹಾಕಲಾದ ಟರ್ಪಾಲ್ ಸರಿಸಿ ಲಾರಿಯಲ್ಲಿ ಲೋಡ್
ಮಾಡಿದ್ದ ರಬ್ಬರ್ ಶೀಟ್‌ಗಳಿರುವ ಬಂಡಲ್‌ಗಳ ಪೈಕಿ ತಲಾ 25 ಕೆ ಜಿ ತೂಕದ ರಬ್ಬರ್ ಶೀಟ್‌ಗಳಿರುವ ಸುಮಾರು 35 ಬಂಡಲ್‌ಗಳನ್ನು ಅಂದರೆ ಸುಮಾರು 1.45 ಲಕ್ಷ ಮೌಲ್ಯದ ರಬ್ಬರ್ ಕಳವು ಮಾಡಿಕೊಂಡು ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಾಬು ಎಂಬವರು ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಉಜಿರೆಯಿಂದ ತಮಿಳುನಾಡಿಗೆ ರಬ್ಬರ್ ಶೀಟ್ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಜು.25 ರಂದು ದೋಣಿಗಲ್‌ನಲ್ಲಿ ರಸ್ತೆ ಕುಸಿತಗೊಂಡು ಸಂಚಾರ ಸಾಧ್ಯವಾಗದೇ ಇದ್ದ ಹಿನ್ನೆಲೆಯಲ್ಲಿ ಅದರ ಚಾಲಕ ಗುಂಡ್ಯದಲ್ಲಿ ನಿಲ್ಲಿಸಿದ್ದರು. ಮರು ದಿನ ಬೆಳಿಗ್ಗೆ ತಮಿಳುನಾಡು ಮೂಲದವರಾದ ಲಾರಿಯ ನಿರ್ವಾಹಕ ಲಾರಿಗೆ ಅಳವಡಿಸಲಾಗಿದ್ದ ಟರ್ಪಾಲ್‌ನಲ್ಲಿ ನಿಂತಿದ್ದ ನೀರು ತೆಗೆಯಲೆಂದು ಲಾರಿಯ ಮೇಲೆ ಹತ್ತಿದ್ದು ಅಲ್ಲಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು.ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ನಿರ್ವಾಹಕನ ಮೃತದೇಹವನ್ನು ಚಾಲಕ ತಮಿಳುನಾಡಿಗೆ ಕೊಂಡೊಯ್ದು ಕುಟುಂಬಸ್ಥರಿಗೆ ಒಪ್ಪಿಸಿ ಮರುದಿನ ಲಾರಿ ನಿಲ್ಲಿಸಿದ್ದ ಗುಂಡ್ಯಕ್ಕೆ ಬಂದ ವೇಳೆ ಲಾರಿಯಿಂದ ಅರ್ಧದಷ್ಟು ರಬ್ಬರ್ ಶೀಟ್ ಕಳವುಗೊಂಡಿದ್ದು ಗಮನಕ್ಕೆ ಬಂದಿದೆ. ಈ ಬಗ್ಗೆ ಲಾರಿ ಚಾಲಕ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

- Advertisement -
spot_img

Latest News

error: Content is protected !!