Saturday, April 27, 2024
Homeಪ್ರಮುಖ-ಸುದ್ದಿಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ

ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ

spot_img
- Advertisement -
- Advertisement -

ಶಿವಮೊಗ್ಗ: ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.ಯಡಿಯೂರಪ್ಪ ಮನೆಯ ಕಿಟಕಿ ಗಾಜು ಒಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ತಳ್ಳಾಟ ನೂಕಾಟ ಉಂಟಾಗಿದೆ. ಹೀಗಾಗಿ ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಚಪ್ಪಲಿ, ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸ್​ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಗಿದೆ. ಶಿಕಾರಿಪುರ ತಾಲೂಕು ಕಚೇರಿ ಎದುರು ಪ್ರತಿಭಟನೆ ಮುಂದುವರೆದಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ರವಾನೆ ಮಾಡಲಾಗಿದೆ.

- Advertisement -
spot_img

Latest News

error: Content is protected !!