Wednesday, May 8, 2024
Homeತಾಜಾ ಸುದ್ದಿಹೋರಾಟ ನಿರತ ರೈತರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ- ಪಂಜಾಬ್‌ನಲ್ಲಿ 1561 ಮೊಬೈಲ್ ಟವರ್‌ಗಳಿಗೆ ಹಾನಿ!..

ಹೋರಾಟ ನಿರತ ರೈತರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ- ಪಂಜಾಬ್‌ನಲ್ಲಿ 1561 ಮೊಬೈಲ್ ಟವರ್‌ಗಳಿಗೆ ಹಾನಿ!..

spot_img
- Advertisement -
- Advertisement -

ಚಂಡೀಗಡ: ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ವರೆಗೆ ಪಂಜಾಬ್‌ನಲ್ಲಿ 1,561 ಮೊಬೈಲ್ ಟವರ್‌ಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.ಟೆಲಿಕಾಂ ಸೇವೆಗಳಿಗೆ ಹಾನಿಯುಂಟು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸರಕಾರ ಆದೇಶ ಹೊರಡಿಸಿದೆ. ಪ್ರತಿಭಟನಾ ನಿರತ ರೈತರು ಮೊಬೈಲ್‌ ಟವರ್‌ಗಳಿಗೆ ಅದರಲ್ಲೂ ರಿಲಯನ್ಸ್‌ ಸಂಸ್ಥೆಗೆ ಸೇರಿದ ‘ಜಿಯೊ ಟವರ್‌’ ಗುರಿಯೋಗಿಸಿಕೊಂಡು ಹಾನಿ ಮಾಡಲಾಗುತ್ತಿದೆ.

ಇದೆ ವೇಳೆ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಅಮರೀಂದರ್‌ ಸಿಂಗ್ ಯಾವುದೇ ಕಾರಣಕ್ಕೂ ಪಂಜಾಬ್‌ನಲ್ಲಿ ಅರಾಜಕತೆ ಸೃಷ್ಟಿಯಾಗಲು ಬಿಡುವುದಿಲ್ಲ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು‌ ಹೇಳಿದ್ದಾರೆ.
ಈ ವರೆಗೆ ಪಂಜಾಬ್‌ನ 22 ಜಿಲ್ಲೆಗಳಲ್ಲಿ ಒಟ್ಟು 21,306 ಮೊಬೈಲ್ ಟವರ್‌ಗಳಿದ್ದು, ಇದರಲ್ಲಿ ಒಟ್ಟು 1,561 ಮೊಬೈಲ್ ಟವರ್‌ಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

- Advertisement -
spot_img

Latest News

error: Content is protected !!