ಮಂಗಳೂರು: ಕೋವಿಡ್ -19 ಸೋಂಕಿನ ಬಗ್ಗೆ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಕೋಮು ಪ್ರಚೋದನಕಾರಿ ಸಂದೇಶ ರವಾನಿಸಿದಲ್ಲಿ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಲಕ್ಷ್ಮೀ ಪ್ರಸಾದ್ ತಾಕೀತು ಮಾಡಿದ್ದಾರೆ.
ದ.ಕ ಜಿಲ್ಲಾದ್ಯಂತ ಕೋವಿಡ್-19 ಸೋಂಕನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕವಾಗಿ ಕೋಮು ಪ್ರಚೋದನಕಾರಿ ಸಂದೇಶ ರವಾನೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯ ನಾಲ್ವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ಮುಂದಿನ ದಿನಗಳಲ್ಲಿ ಯಾವುದೇ ಕೋಮಿನ ಬಗ್ಗೆ ಸಾಮಾಜಿಕ ಸ್ವಾಸ್ಥ್ಯ ಕೊಡುವಂತಹ ಕೋಮು ಪ್ರಚೋದನಕಾರಿ ಸಂದೇಶ ಅಥವಾ ಚಿತ್ರಗಳನ್ನು ರವಾನಿಸಿದಲ್ಲಿ ಅಂತವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡು, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಹೋಮ್ ಕ್ವಾರಂಟೈನ್ ನಲ್ಲಿರುವವರು ಇಂತಹ ಕುಕೃತ್ಯದಲ್ಲಿ ತೊಡಗಿರೋದು ನಮ್ಮ ಗಮನಕ್ಕೆ ಬಂದಿರುತ್ತದೆ. ಅಂತರವನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಿ ಅವಧಿ ಮುಗಿದ ಬಳಿಕ ತಕ್ಷಣ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಕೋಮು ಪ್ರಚೋದನಕಾರಿ ಸಂದೇಶ ರವಾನಿಸಿದರೆ ಕಠಿಣ ಕ್ರಮ”
- Advertisement -
- Advertisement -
- Advertisement -