Thursday, June 25, 2026
Homeಅಪರಾಧಬೆಳಗಾವಿ: ಉಪ್ಪಿನಂಗಡಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು:...

ಬೆಳಗಾವಿ: ಉಪ್ಪಿನಂಗಡಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು: ಗೃಹ ಸಚಿವ ಅರಗಜ್ಞಾನೇಂದ್ರ

- Advertisement -
- Advertisement -

ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾನ್ಯ ಗೃಹ ಸಚಿವರಾದ ಸನ್ಮಾನ್ಯ ಅರಗಜ್ಞಾನೇಂದ್ರರವರನ್ನು ದಕ್ಷಿಣಕನ್ನಡ ಜಿಲ್ಲೆಯ ಶಾಸಕರ ನಿಯೋಗ ಬೇಟಿ ಮಾಡಿ ಚರ್ಚಿಸಿದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಘಟನೆಯನ್ನು ಪ್ರಸ್ತಾಪಿಸಿದರು. ಪೊಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇದನ್ನು ಸೂಕ್ತ ರೀತಿಯಲ್ಲಿ ಹತ್ತಿಕ್ಕುವ ಕಾರ್ಯ ಇಲಾಖೆಯಿಂದ ಆಗಬೇಕಿದೆ. ಈ ಬಗ್ಗೆ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಲಾಯಿತು.

ಮಾನ್ಯ ಸಚಿವರಾದ ಎಸ್.ಅಂಗಾರ ಶಾಸಕರುಗಳಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್,ಉಮಾನಾಥ ಕೋಟ್ಯಾನ್, ಡಾ.ಭರತ್ ಶೆಟ್ಟಿ ,ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!