- Advertisement -
- Advertisement -
ಬೆಂಗಳೂರು(ಏ. 11): ಕೊರೋನಾ ವೈರಸ್ ಸೋಂಕು ತಹಬದಿಗೆ ಬರದ ಹಿನ್ನೆಲೆಯಲ್ಲಿ ಏಪ್ರಿಲ್ 30ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಇವತ್ತು ಪ್ರಧಾನಿ ಮೋದಿ ಅವರ ಜೊತೆ ವಿಡಿಯೋ ಕಾನ್ಫೆರೆನ್ಸ್ನಲ್ಲಿ ಸಂವಾದದಲ್ಲಿ ಪಾಲ್ಗೊಂಡ ಬಳಿ ಸಿಎಂ ಅವರು ಸುದ್ದಿಗೋಷ್ಟಿ ನಡೆಸಿ ಈ ಈ ವಿಚಾರ ತಿಳಿಸಿದ್ದಾರೆ.
ಪ್ರಧಾನಿ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಪ್ರಸ್ತಾಪಿಸಲಾದ ವಿಚಾರಗಳ ಬಗ್ಗೆ ಸಿಎಂ ಯಡಿಯೂರಪ್ಪ ಈ ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡರು. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೊರತುಪಡಿಸಿ ಉಳಿದೆಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ ಡೌನ್ ವಿಸ್ತರಣೆಯಾಗಬೇಕೆಂದು ಪ್ರಧಾನಿಗೆ ಸಲಹೆ ನೀಡಿದ್ದರು. ಯಡಿಯೂರಪ್ಪ ಕೂಡ ಇದೇ ವಿಚಾರವನ್ನು ಪ್ರಸ್ತಾಪಿಸಿ ಲಾಕ್ ಡೌನ್ ಮುಂದುವರಿಸುವಂತೆ ಮನವಿ ಮಾಡಿದ್ದರು. ಪ್ರಧಾನಿ ಮೋದಿ ಕೂಡ ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ. ಬಹುತೇಕ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇದೆ.
- Advertisement -