Saturday, May 18, 2024
HomeUncategorized1ರಿಂದ 5 ನೇ ತರಗತಿ ಆರಂಭಿಸಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಖಡಕ್...

1ರಿಂದ 5 ನೇ ತರಗತಿ ಆರಂಭಿಸಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸುರೇಶ್ ಕುಮಾರ್

spot_img
- Advertisement -
- Advertisement -

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯಿಂದಾಗಿ ರಾಜ್ಯದಲ್ಲಿ 1-5 ನೇ ತರಗತಿ ಆರಂಭಗೊಂಡಿಲ್ಲ. ಇದರ ನಡುವೆ ಕೆಲವು ಖಾಸಗಿ ಶಾಲೆಗಳು 1-5 ನೇ ತರಗತಿಗಳನ್ನು ಆರಂಭಿಸಿದ್ದವು. ಕೋವಿಡ್ ಹಿನ್ನೆಲೆ ಸರ್ಕಾರದ ಸೂಚನೆ ಇಲ್ಲದೇ ಹೋದರೂ 1 ರಿಂದ 5 ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದ ಹಲವು ಕಡೆ ಖಾಸಗಿ ಶಾಲೆಗಳು 1 ರಿಂದ 5 ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಬಗ್ಗೆ ವರದಿಯಾಗಿರುವ ಹಿನ್ನೆಲೆ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಲೂಕು ಮಟ್ಟದಲ್ಲಿ ಪರಿಶೀಲನಾ ತಂಡಗಳನ್ನು ರಚಿಸಿ , ಈ ರೀತಿ ಅನಧಿಕೃವಾಗಿ 1 ರಿಂದ 5 ರಿಂದ ತರಗತಿ ನಡೆಸುತ್ತಿರುವ ಶಾಲೆ ಹಾಗೂ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಕೂಡಲೇ ಸುತ್ತೋಲೆ ಹೊರಡಿಸುವಂತೆ ಸುರೇಶ್ ಕುಮಾರ್ ಸೂಚನೆ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!