Saturday, June 6, 2026
Homeತಾಜಾ ಸುದ್ದಿಬೆಳ್ತಂಗಡಿ: ಪ್ರವೀಣ್‌ ನೆಟ್ಟಾರು ಹತ್ಯೆಗೆ ತೀವ್ರ ಖಂಡನೆ: ಬಿಲ್ಲವ ಸಂಘದಿಂದ ಸಂಜೆ 7.00 ಕ್ಕೆ ಮೌನ...

ಬೆಳ್ತಂಗಡಿ: ಪ್ರವೀಣ್‌ ನೆಟ್ಟಾರು ಹತ್ಯೆಗೆ ತೀವ್ರ ಖಂಡನೆ: ಬಿಲ್ಲವ ಸಂಘದಿಂದ ಸಂಜೆ 7.00 ಕ್ಕೆ ಮೌನ ಪ್ರತಿಭಟನೆ

- Advertisement -
- Advertisement -

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆಯನ್ನು ಖಂಡಿಸಿ ಬೆಳ್ತಂಗಡಿ ಬಿಲ್ಲವ ಸಂಘದಿಂದ ಇಂದು ಸಂಜೆ 7.00 ಗಂಟೆಗೆ ಬೆಳ್ತಂಗಡಿ ಬಸ್ಸು ತಂಗುದಾಣದ ಬಳಿ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಯಲಿದೆ.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯುವ ಈ ಮೌನ ಪ್ರತಿಭಟನೆಯಲ್ಲಿ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ, ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಯುವವಾಹಿನಿ (ರಿ.) ಬೆಳ್ತಂಗಡಿ ಮತ್ತು ಯುವವಾಹಿನಿ (ರಿ.) ವೇಣೂರು ಘಟಕ ಸಹಭಾಗಿಯಾಗಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿದ ಕೊಲೆಗಡುಕರನ್ನ ಕೂಡಲೇ ಬಂಧಿಸಿ. ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ, ಪ್ರತಿಭಟನೆ ನಡೆಯಲಿದೆ.

- Advertisement -

Latest News

error: Content is protected !!