- Advertisement -
- Advertisement -
ಕಲಬುರಗಿ : ಕನ್ನಡ ರಾಜ್ಯೋತ್ಸವದ ದಿನದಂದು ಯೋಜನೆ ರೂಪಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಧ್ವಜಾರೋಹಣಕ್ಕೆ ಯತ್ನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರನ್ನು ಪೊಲಿಸರು ಬಂಧಿಸಿದ್ದಾರೆ.
ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟ ಸಮಿತಿಯಿಯಿಂದ ಪ್ರತಿಭಟನೆ ನಡೆಸಲಾಗಿದ್ದು ಪ್ರತಿಭಟನೆ ಬಳಿಕ ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ್ದ ಹೋರಾಟ ಸಮಿತಿಯ 10 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಬೋಳ್ ‘ಕಲ್ಯಾಣ ಕರ್ನಾಟಕದ ಹೆಸರಿನಿಂದ ಅಭಿವೃದ್ಧಿ ಆಗಲ್ಲ. ಕಲ್ಯಾಣ ಕರ್ನಾಕಟ ಪ್ರತ್ಯೇಕ ರಾಜ್ಯದಿಂದ ಮಾತ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಸಾಧ್ಯ’ ಎಂದರು.
- Advertisement -