Thursday, June 25, 2026
Homeಕರಾವಳಿಮಂಗಳೂರು; ಉಳ್ಳಾಲದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ; ಸಾಂಬಾರ್ ಚೆಲ್ಲಿದ್ದಕ್ಕೆ ಹಲ್ಲೆ ಮಾಡಿದಾತನಿಗೆ ಚೂರಿಯಿಂದ ಇರಿದ ವಿದ್ಯಾರ್ಥಿ

ಮಂಗಳೂರು; ಉಳ್ಳಾಲದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ; ಸಾಂಬಾರ್ ಚೆಲ್ಲಿದ್ದಕ್ಕೆ ಹಲ್ಲೆ ಮಾಡಿದಾತನಿಗೆ ಚೂರಿಯಿಂದ ಇರಿದ ವಿದ್ಯಾರ್ಥಿ

- Advertisement -
- Advertisement -

ಮಂಗಳೂರು; ಉಳ್ಳಾಲದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ತನ್ನ ಮೇಲೆ ಸಾಂಬಾರ್ ಚೆಲ್ಲಿದ್ದಕ್ಕೆ ಹಲ್ಲೆ ಮಾಡಿದಾತನಿಗೆ ಹಲ್ಲೆಗೊಳಗಾದ ವಿದ್ಯಾರ್ಥಿ ಚೂರಿಯಿಂದ ಇರಿದ ಘಟನೆ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಸ್ಕೂಲ್ ನಲ್ಲಿ ನಡೆದಿದೆ.

ಮಧ್ಯಾಹ್ನ ಊಟದ ಹೊತ್ತಿನಲ್ಲಿ 9 ನೇ ತರಗತಿಯ ಒಬ್ಬ ವಿದ್ಯಾರ್ಥಿಯೊಬ್ಬನ ತಟ್ಟೆಯಿಂದ ಮತ್ತೊಬ್ಬ ವಿದ್ಯಾರ್ಥಿಯ ಬಟ್ಟೆ ಸಾಂಬಾರು ಚೆಲ್ಲಿದ್ದಕ್ಕೆ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಾನೆ. ಇದಕ್ಕೆ ಕೆರಳಿದ ಪೆಟ್ಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಚೂರಿ ತೆಗೆದು ಆತನ ಮೇಲೆ ನೇರವಾಗಿ ಎಸೆದಿದ್ದಾನೆ. ಅದೃಷ್ಟವಶಾತ್ ಎದೆ ಭಾಗದಿಂದ ಸ್ವಲ್ಪ ಪಕ್ಕದಲ್ಲಿ ಚೂರಿ ತಗುಲಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ವೈಸ್ ಪ್ರಿನ್ಸಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯ ಮಾಹಿತಿ ಪಡೆದ ದಕ್ಷಿಣ ಉಪ‌ ವಿಭಾಗ ಎಸಿಪಿ, ಕೊಣಾಜೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸೇರಿದಂತೆ ಅಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಭೇಟಿ ನೀಡಿ ಬಾಲಕನಿಗೆ ಬುದ್ಧಿ ಹೇಳಿ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಒಂಬತ್ತನೆಯ ತರಗತಿ ವಿದ್ಯಾರ್ಥಿ ಚೂರಿ ಬಸ್ ಸ್ಟಾಂಡ್ ನಲ್ಲಿ ಬಿದ್ದು ಸಿಕ್ಕಿದ್ದು ಎಂದು ಹೇಳಿದ್ದಾನೆ. ವಿದ್ಯಾರ್ಥಿಗಳಲ್ಲಿ ಇಂತಹ ಕೌರ್ಯ ಮನಸ್ಥಿತಿ ಇದ್ದರೆ ಹೇಗೆ ಎಂದು ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

- Advertisement -

Latest News

error: Content is protected !!