ಕಾರ್ಕಳ: ಹೊಸ ಮೊಬೈಲ್ ಕೊಡಿಸಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ.ನಂದಳಿಕೆ ಗ್ರಾಮದ ನಿವಾಸಿ ಸುರೇಖಾ ಎಂಬುವವರು ಮಗ ಸುಮಂತ ದೇವಾಡಿಗ (16) ಮೃತ ದುರ್ದೈವಿ.
ಸುಮಂತನು ನಿಟ್ಟೆ ಕಾಲೇಜಿನಲ್ಲಿ ಮೊದಲನೇ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದನು. ದಿನಾಂಕ 12/11/2025 ರಂದು ಸಂಜೆ 7:00 ಗಂಟೆಗೆ ಸುಮಂತನು ಮನೆಯಲ್ಲಿ ತನ್ನ ತಾಯಿಯೊಂದಿಗೆ ಹೊಸ ಮೊಬೈಲ್ ತೆಗೆದುಕೊಡಬೇಕೆಂದು ಜಗಳ ಮಾಡಿ ಮನೆ ಬಿಟ್ಟು ಹೋಗಿದ್ದ. ಬಳಿಕ ಆತನನ್ನು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ದಿನಾಂಕ 13/11/2025 ರಂದು ಸುಮಂತನನ್ನು ಹುಡುಕಾಡುತ್ತಿದ್ದಾಗ ಮಧ್ಯಾಹ್ನ 15:30 ಗಂಟೆಗೆ ನಂದಳಿಕೆ ಗ್ರಾಮದ ಕೊಡ್ಸರಬೆಟ್ಟು ಎಂಬಲ್ಲಿ ಸೂರ್ಯಕಾಂತ ಶೆಟ್ಟಿ ಎಂಬುವವರ ಜಾಗದಲ್ಲಿರುವ ಕಲ್ಲಿನ ಕೋರೆಯ ನಿಂತ ನೀರಿನ ಬಳಿ ಆತನ ಚಪ್ಪಲಿ ಕಂಡುಬಂದಿದ್ದು ಅನುಮಾನಗೊಂಡು ನೀರಿನಲ್ಲಿ ಹುಡುಕಾಡಿದಾಗ ಆತನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 56/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.


