Sunday, May 12, 2024
Homeಕರಾವಳಿಪುತ್ತೂರು; ಕುಂಬ್ರದಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು; ಕುಂಬ್ರದಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

spot_img
- Advertisement -
- Advertisement -

ಪುತ್ತೂರು; ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ.

ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು ಬಂದು ಮನೆಯ ಸಮೀಪದ ಗುಡ್ಡದಲ್ಲಿ ಹೋಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ರಿತೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌.

ತಕ್ಷಣ ಅವರನ್ನು ಇಳಿಸಿ ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ರಿತೇಶ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!