Thursday, July 16, 2026
Homeಕರಾವಳಿಮಂಗಳೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು : ನೇಣು ಬಿಗಿದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಗಂಬಿಲದಲ್ಲಿ ಗುರುವಾರ ಸಂಜೆ ನಡೆದಿದೆ. ಹರ್ಷದೀಪ್(20) ಮೃತ ವಿದ್ಯಾರ್ಥಿ.

ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ‌ ವಿದ್ಯಾರ್ಥಿಯಾಗಿದ್ದ ಈತ ಗುರುವಾರ ಬಗಂಬಿಲದ ತನ್ನ ಮನೆಗೆ ಬಂದಿದ್ದು, ಮನೆಯಲ್ಲಿ ತಾಯಿ ಮತ್ತು ಮಗ ವಾಸವಾಗಿದ್ದರು.

ತಾಯಿಗೆ ತುಂಬಾ ಸಾಲ ಇರುವ ಬಗ್ಗೆ ಅರಿತ ವಿದ್ಯಾರ್ಥಿ ಹರ್ಷದೀಪ್‌ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!