Saturday, June 13, 2026
Homeಕರಾವಳಿಉಡುಪಿಉಡುಪಿ: ಫೇಲ್ ಆಗೋ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಉಡುಪಿ: ಫೇಲ್ ಆಗೋ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಉಡುಪಿ: ಫೇಲ್ ಆಗೋ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಛತ್ತಿಸ್‌ಗಡದ ಅನ್ಶುಲ್ ಯಾದವ್ (21) ಮೃತ ವಿದ್ಯಾರ್ಥಿ.  ಮಣಿಪಾಲದ ಸ್ಕೂಲ್ ಆಫ್ ಕಾಮರ್ಸ್ ಎಕೊನೋಮಿಕ್ ಅಕಾಡೆಮಿ ವಿದ್ಯಾರ್ಥಿಯಾಗಿರುವ ಅನ್ಶುಲ್ ಯಾದವ್ ಫೇಲ್ ಆಗೋ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಮಣಿಪಾಲದ ಎಂಐಟಿ ಹಾಸ್ಟೆಲ್‌ ನಲ್ಲಿ ವಾಸ್ತವ್ಯ ಮಾಡಿಕೊಂಡಿದ್ದ.  ತನ್ನ ಮೊದಲ ವರ್ಷದ ಸೆಕೆಂಡ್ ಸೆಮಿಸ್ಟರ್‌ನಲ್ಲಿ 4 ವಿಷಯ ಗಳಲ್ಲಿ ಅನುತ್ತೀರ್ಣಗೊಂಡ ವಿಚಾರದಲ್ಲಿ ಮನನೊಂದು ಮೇ 12ರಂದು ರಾತ್ರಿಯಿಂದ ಮೇ 18ರ ಬೆಳಗಿನ ಮಧ್ಯಾವಧಿಯಲ್ಲಿ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!