- Advertisement -
![]()
- Advertisement -
ಮೂಡಬಿದಿರೆ: ಪ್ರತಿಷ್ಟಿತ ಖಾಸಗಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ. ಬೆಂಗಳೂರು ಸಮೀಪದ ಹೊಸೂರು ನಿವಾಸಿ ಪ್ರಸ್ತುತ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ಶಶಾಂಕ್ ಮೃತ ದುರ್ದೈವಿ.
ಶಶಾಂಕ್ ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ . ಮೃತದೇಹವನ್ನು ಮೂಡಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ನಡೆಸಿ ಶುಕ್ರವಾರ ಬೆಳಗ್ಗೆ ಹೆತ್ತವರಿಗೆ ಹಸ್ತಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ
- Advertisement -


