Friday, May 3, 2024
Homeಕರಾವಳಿಪುತ್ತೂರಿನ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಪುತ್ತೂರಿನ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಪುತ್ತೂರು; ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ನಿಶಾ(17) ಮೃತ ವಿದ್ಯಾರ್ಥಿನಿ.

ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದರೆ ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ, ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದಳು ಎನ್ನಲಾಗಿದೆ. ಆಕೆ ವಾಂತಿ ಮಾಡುತ್ತಿದ್ದದ್ದನ್ನು ಗಮನಿಸಿದ  ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ.

ಕೂಡಲೇ ಪುತ್ತೂರಿನ ಆಸ್ಪತ್ರೆಗೆ ನಿಶಾ ಅವರನ್ನು ದಾಖಲಿಸಲಾಗಿತ್ತು, ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು. ಅದರಂತೆ ಕಳೆದ ಒಂದು ವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!