Friday, June 5, 2026
Homeಕರಾವಳಿಬೆಳ್ತಂಗಡಿ: ವೈಯಕ್ತಿಕ ವಿಡಿಯೋವನ್ನು ವೈರಲ್ ಮಾಡುವ ಬೆದರಿಕೆ;ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಬೆಳ್ತಂಗಡಿ: ವೈಯಕ್ತಿಕ ವಿಡಿಯೋವನ್ನು ವೈರಲ್ ಮಾಡುವ ಬೆದರಿಕೆ;ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ವೀಡಿಯೊವನ್ನು ವೈರಲ್ ಮಾಡೋದಾಗಿ ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದರಿಂದ ಭಯಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ ಆತ್ಮಹತ್ಯೆ ಶರಣಾದವರು. ಹರ್ಷಿತ್ ಗೆ ಇನ್ ಸ್ಟಾಗ್ರಾಂ ನಲ್ಲಿ  ಅಪರಿಚಿತ ವ್ಯಕ್ತಿ ಪರಿಚಯವಾಗಿದ್ದು, ಇವರು ಚಾಟ್ ಮಾಡುತ್ತಿದ್ದಲ್ಲದೆ  ವೀಡಿಯೋಕಾಲ್ ಮಾಡಿ ಮಾತನಾಡುತ್ತಿದ್ದರೆನ್ನಲಾಗಿದೆ.  ಈ ನಡುವೆ ಅಪರಿಚಿತ  ತನ್ನ ಬಳಿ  ನಿನ್ನ ವೈಯುಕ್ತಿಕ ವೀಡಿಯೋ ಇದೆ, ಹಣ ನೀಡದಿದ್ದಲ್ಲಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಆದರೆ ಹಣ ನೀಡಲು ಸಾಧ್ಯವಾಗದ ವಿದ್ಯಾರ್ಥಿ ಭಯಗೊಂಡು ಮನೆಯಲ್ಲಿ ದಿನಾಂಕ 24-1-2023 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

 ಮನೆಯವರು ಇದನ್ನು ಗಮನಿಸಿದ್ದು ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ  ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ . ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!