Friday, June 5, 2026
Homeಕರಾವಳಿಮಂಗಳೂರು;  ಹೆತ್ತವರು ಖರ್ಚಿಗೆ ಹಣ ಕೊಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಗಳೂರು;  ಹೆತ್ತವರು ಖರ್ಚಿಗೆ ಹಣ ಕೊಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಮಂಗಳೂರು;  ಹೆತ್ತವರು ಖರ್ಚಿಗೆ ಹಣ ಕೊಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಾರ್ ಸುಭಾಷ್ ನಗರದಲ್ಲಿ ನಡೆದಿದೆ.ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್(17)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ಪ್ರಥಮ ಪಿಯುಸಿ ಮುಗಿಸಿದ್ದ ಸುಶಾಂತ್ ನನ್ನು ಮೊನ್ನೆ ಡಿಪ್ಲೊಮಾಗೆ ಸೇರಿಸಲಾಗಿತ್ತು. ಮೊನ್ನೆ 500ರೂ. ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ನಿನ್ನೆ ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲಿದ್ದ ಸುಶಾಂತ್ ಕೋಣೆಯೊಳಗೆ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!