Thursday, June 4, 2026
Homeಕರಾವಳಿಉಪ್ಪಿನಂಗಡಿ ; ಪದವಿ ವಿದ್ಯಾರ್ಥಿ ನೇಣಿಗೆ ಶರಣು

ಉಪ್ಪಿನಂಗಡಿ ; ಪದವಿ ವಿದ್ಯಾರ್ಥಿ ನೇಣಿಗೆ ಶರಣು

- Advertisement -
- Advertisement -

ಉಪ್ಪಿನಂಗಡಿ ; ಪದವಿ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಘಟನೆ ಉಪ್ಪಿನಂಗಡಿ ಬಳಿಯ ಪೆರಿಯಡ್ಕ್ ಎಂಬಲ್ಲಿ ನಡೆದಿದೆ. ಅತ್ತಾವುಲ್ಲಾ ಮೃತ ವಿದ್ಯಾರ್ಥಿ.

ಅತ್ತಾವುಲ್ಲಾ ಮಡಂತ್ಯಾರಿನ ಕಾಲೇಜು ಒಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ. ಕಳೆದ ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ ಎನ್ನಲಾಗಿದೆ. ಕೆಲವು ದಿನಗಳಿಂದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದ ಎನ್ನಲಾಗಿದೆ.

 ಫೆಬ್ರವರಿ 14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಆದ್ರೆ ವಾಪಸ್ಸು ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!