Saturday, June 6, 2026
Homeಕರಾವಳಿಕಡಬ: ನೆಲ್ಯಾಡಿಯಲ್ಲಿ ಪದವಿ ವಿದ್ಯಾರ್ಥಿನಿ ನಿಧನ

ಕಡಬ: ನೆಲ್ಯಾಡಿಯಲ್ಲಿ ಪದವಿ ವಿದ್ಯಾರ್ಥಿನಿ ನಿಧನ

- Advertisement -
- Advertisement -

ಕಡಬ: ಪದವಿ ವಿದ್ಯಾರ್ಥಿನಿಯೊಬ್ಬರು ಅನಾರೋಗ್ಯದಿಂದ ನಿಧನಳಾದ ಘಟನೆ ಗೋಳಿತ್ತೊಟ್ಟು ಗ್ರಾಮದ ಜನತಾ ಕಾಲೋನಿಯಲ್ಲಿ ನಡೆಯಲಿದೆ. ಮಂಗಳೂರು ವಿವಿ ನೆಲ್ಯಾಡಿ ಘಟಕ ಕಾಲೇಜಿನಲ್ಲಿ ಪ್ರಥಮ ಬಿ.ಎ ಓದುತ್ತಿದ್ದ ಮಮತಾ(18) ಮೃತ ದುರ್ದೈವಿ.

ದಿ.ಸುಂದರ ಪೂಜಾರಿ ಹಾಗೂ ಲೀಲಾವತಿ ದಂಪತಿ ಪುತ್ರಿ ಮಮತಾ ಅನಾರೋಗ್ಯದಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಎ.25ರಂದು ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಮನೆಯವರು ನೆಲ್ಯಾಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಅಲ್ಲಿನ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ,

- Advertisement -

Latest News

error: Content is protected !!