Saturday, June 6, 2026
Homeಕರಾವಳಿಉಪ್ಪಿನಂಗಡಿ: ನದಿಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ: ನದಿಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು

- Advertisement -
- Advertisement -

ಉಪ್ಪಿನಂಗಡಿ:ನದಿಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿಯ ಕೆಂಪಿಮಜಲು ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರೂಪೇಶ್ (17) ಮೃತ ಯುವಕ.

ಬಜತ್ತೂರು ನಿವಾಸಿ ಓಡಿಯಪ್ಪ ಎಂಬವರ ಪುತ್ರ ರೂಪೇಶ್ ಕಟ್ಟೆಚ್ಚಾರ್ ಎಂಬಲ್ಲಿನ ತನ್ನ ಸಂಬಂಧಿಕರ ಮನೆಗೆ ಹೋಗಿ, ಅಲ್ಲಿಂದ ನಿನ್ನೆ ಸಂಬಂಧಿಕ ಅಖಿಲೇಶ್ ಎಂಬಾತನೊಂದಿಗೆ ನೇತ್ರಾವತಿ ನದಿಯ ಸನ್ಯಾಸಿ ಕಯದಲ್ಲಿ ಮೀನು ಹಿಡಿಯಲೆಂದು ತೆರಳಿದ್ದ. ಈ ವೇಳೆ ಈಜು ಬಾರದ ರೂಪೇಶ್ ನೀರಿನಲ್ಲಿ ಮುಳುಗಿದ್ದಾನೆ.

ಅಖಿಲೇಶ್ ಆತನನ್ನು ನೀರಿನಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾನೆ.ಆದರೆ ಅಷ್ಟರಲ್ಲಿ  ಆತ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!