Saturday, June 6, 2026
Homeಕರಾವಳಿಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಸಾವು

- Advertisement -
- Advertisement -

ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಪೆದಮಲೆಯಲ್ಲಿ ನಡೆದಿದೆ.ಇಂಡಿಯನ್‌ ಸ್ಕೂಲ್‌ನ ಹತ್ತನೇ ತರಗತಿ ವಿದ್ಯಾರ್ಥಿ ಅಹ್ಮದ್‌ ಸಹದ್‌ (15) ಮೃತ ದುರ್ದೈವಿ.

ಅಹ್ಮದ್ ಸಹದ್  ಶಾಲೆಯಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದು, ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈತನನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಆತ ನಿಧನ ಹೊಂದಿದ್ದಾನೆ.ಮೃತ ಬಾಲಕ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾನೆ.

- Advertisement -

Latest News

error: Content is protected !!