Saturday, August 29, 2026
Homeಕರಾವಳಿನಿಯಂತ್ರಣ ತಪ್ಪಿ ಡಿವೈಡರ್‌ ಗೆ ಢಿಕ್ಕಿ ಹೊಡೆದ ಸ್ಕೂಟಿ; ವಿದ್ಯಾರ್ಥಿ ಮೃತ್ಯು

ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಢಿಕ್ಕಿ ಹೊಡೆದ ಸ್ಕೂಟಿ; ವಿದ್ಯಾರ್ಥಿ ಮೃತ್ಯು

- Advertisement -
- Advertisement -

ಕಾಸರಗೋಡು: ಕುಂಬಳೆ ಸಮೀಪದ ಮಾವಿನ ಕಟ್ಟೆ ನಿಯಂತ್ರಣ ತಪ್ಪಿದ ಸ್ಕೂಟಿಯೊಂದು ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್ ಗೆ ಬಡಿದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಎಂಬಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ಬಂದ್ಯೋಡು ಇಚ್ಲಂಗೋಡು ದಿನಾರ್ ನಗರದ ಯೂಸಫ್ (20) ಎಂದು ತಿಳಿದು ಬಂದಿದೆ.

ಯೂಸಫ್ ಶಿರಿಯ ಶಾಲೆಯ ಪ್ಲಸ್ ಟು ವಿದ್ಯಾರ್ಥಿಯಾಗಿದ್ದನು. ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮ ಮುಗಿಸಿ ಸಹಪಾಠಿಯನ್ನು ಮೊಗ್ರಾಲ್ ನ ಮನೆಗೆ ತಲುಪಿಸಿ ಮರಳುತ್ತಿದ್ದಾಗ ಕುಂಬಳೆ ಮಾವಿನ ಕಟ್ಟೆ ಬಳಿ ನಿಯಂತ್ರಣ ತಪ್ಪಿ ಸ್ಕೂಟಿ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಯೂಸಫ್ ನನ್ನು ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಮೃತಪಟ್ಟಿದ್ದರು. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!