Friday, June 5, 2026
Homeಕರಾವಳಿಬಂಟ್ವಾಳ; ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಬಂಟ್ವಾಳ; ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

- Advertisement -
- Advertisement -

ಬಂಟ್ವಾಳ: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ.

ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತ ಬಾಲಕ. ಪ್ರಜ್ವಲ್ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ .  ಕೂಡಲೇ ಸ್ಥಳೀಯ ಮುಳುಗು ತಜ್ಞರು ನೀರಿಗೆ ಹಾರಿ ಬಾಲಕನನ್ನು ಮೇಲಕ್ಕೆ ಎತ್ತಿ ತಂದರೂ ಅದಾಗಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!