Sunday, October 18, 2026
Homeಕರಾವಳಿಉಡುಪಿಕಾರ್ಕಳ : ಬಸ್ಸಿನಿಂದ ಬಿದ್ದು ಡಿಗ್ರಿ ವಿದ್ಯಾರ್ಥಿ ಸಾವು

ಕಾರ್ಕಳ : ಬಸ್ಸಿನಿಂದ ಬಿದ್ದು ಡಿಗ್ರಿ ವಿದ್ಯಾರ್ಥಿ ಸಾವು

- Advertisement -
- Advertisement -

ಕಾರ್ಕಳ : ಬಸ್ಸಿನಿಂದ ಬಿದ್ದು ಡಿಗ್ರಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ.ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್‌ ಶೆಟ್ಟಿ (19) ಮೃತ ವಿದ್ಯಾರ್ಥಿ.

ಜನಿತ್  ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ಓದುತ್ತಿದ್ದು. ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ  ಕೆಳಗೆ ಎಸೆಯಲ್ಪಟ್ಟಿದ್ದಾನೆ.ಈ ವೇಳೆ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ  ಗಂಭೀರ ಗಾಯಗೊಂಡಿದ್ದ. ಕೂಡಲೇ  ಆತನನ್ನು  ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಜನಿತ್‌ ಕೊನೆಯುಸಿರೆಳೆದಿದ್ದಾರೆ. ಮೃತ ಜನಿತ್ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!