Sunday, June 28, 2026
Homeತಾಜಾ ಸುದ್ದಿಬಂಟ್ವಾಳ: ಬಸ್ ನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿನಿಗೆ ಗಾಯ

ಬಂಟ್ವಾಳ: ಬಸ್ ನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿನಿಗೆ ಗಾಯ

- Advertisement -
- Advertisement -

ಬಂಟ್ವಾಳ: ಬಸ್ ನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿನಿಗೆ ಗಾಯವಾಗಿರುವ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.

ಪಾಣೆಮಂಗಳೂರು ಗ್ರಾಮದ ಗುಡ್ಡೆಯಂಗಡಿ ನಿವಾಸಿ ಮುಹಮ್ಮದ್ ರಫೀಕ್ ಎಂಬವರ ಮಗಳು ಅಪ್ಸನಾ ಗಾಯಗೊಂಡ ವಿದ್ಯಾರ್ಥಿನಿ. ಈಕೆಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗ್ಗೆ ಸುಮಾರು 9.30 ಗಂಟೆಗೆ ಅಪ್ಸನಾ ಹೋಗುತ್ತಿದ್ದ ಬಸ್‌ ನ  ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಬಸ್ಸ್ ನಿಂದ ಇಳಿಯಲು ಡೋರ್ ಬಳಿ ನಿಂತಿದ್ದ ವಿದ್ಯಾರ್ಥಿನಿ ಬಸ್‌ನಿಂದ ಒಮ್ಮೆಲೆ ಹೊರೆಗೆ ಎಸೆಯಲ್ಪಟ್ಟಿದ್ದಾಳೆ ಎನ್ನಲಾಗಿದೆ. ರಸ್ತೆಗೆ ಬಿದ್ದು ಆಕೆಯ ತಲೆಗೆ ಗಂಭೀರ ಗಾಯವಾಗಿದೆ. ಮಂಗಳೂರು ನಗರದ ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಂಟ್ವಾಳ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!