ಚಿಕ್ಕಮಗಳೂರು: ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ನಡೆದಿದೆ.18 ವರ್ಷದ ವಿಶ್ಲೇಷ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ವಿಶ್ಲೇಷ್ ನಾಲ್ಕು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡು ತೀವ್ರ ಶಾರೀರಿಕ ಹಾಗೂ ಮಾನಸಿಕ ನೋವು ಅನುಭವಿಸುತ್ತಿದ್ದ. ನೋವಿನಿಂದ ಮನನೊಂದು, ಅವನು ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಶ್ಲೇಷ್ ಕೊಪ್ಪದಲ್ಲಿರುವ ಐಟಿಐ ಸಂಸ್ಥೆಯಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ. ದೈಹಿಕ ಹಾಗೂ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದ ಆತ, ಯಾವಾಗಲೂ ಆಸ್ಪತ್ರೆಗೆ ಹೋಗಿ ಬರಬೇಕಾಗುತ್ತಿತ್ತು. ನಿರಂತರ ಚಿಕಿತ್ಸೆ ಮತ್ತು ಹಲ್ಲುಗಳಿಗೆ ಸಂಬಂಧಿಸಿದ ಸಮಸ್ಯೆಗಳ ನಡುವೆ ಆತ ಮಾನಸಿಕ ನೊಂದಿದ್ದ. ಇದರಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


