Thursday, June 4, 2026
Homeಕರಾವಳಿಉಡುಪಿಉಡುಪಿ; ಮದರಸಾದಿಂದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಉಡುಪಿ; ಮದರಸಾದಿಂದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

- Advertisement -
- Advertisement -

ಉಡುಪಿ : ಮದರಸಾದಿಂದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಶಿರ್ವ ಫೈಝುಲ್ ಇಸ್ಲಾಂ ಮದರಸದಲ್ಲಿ ನಡೆದಿದೆ. ಬಿಹಾರ ಮೂಲದ ತಬಾರಕ್, ಜಂಶೀದ್, ತಂಝೀರ್ ಆಲಮ್, ಶಾಹಿಲ್ ನಾಪತ್ತೆಯಾದ ವಿದ್ಯಾರ್ಥಿಗಳು. ಇವರಲ್ಲಿ ಇಬ್ಬರು ಅಪ್ರಾಪ್ತರು ಎನ್ನಲಾಗಿದೆ.

ಮದ್ರಸಾ ಶಿಕ್ಷಣ ಕಲಿಯುತ್ತಿದ್ದ ಇವರು, ಮೇ. 14 ರಂದು ಮಧ್ಯಾಹ್ನದ ವೇಳೆ ಮದ್ರಸಾದಿಂದ ಹೊರಗಡೆ ಹೋದವರು ಈವರೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಇಲ್ಲಿಂದ ಅವರು ತಮ್ಮ ಊರಿಗೆ ಹೋಗಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಫೈಝುಲ್ ಇಸ್ಲಾಂ ಎಜುಕೇಶನ್ ಟ್ರಸ್ಟ್ನ ಫರ್ವೇಝ್ ಸಲೀಂ ನೀಡಿದ ದೂರನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ

- Advertisement -

Latest News

error: Content is protected !!