Friday, June 26, 2026
Homeಆರಾಧನಾಮೈಸೂರಲ್ಲಿ ಮತ್ತೆ ಕಾಮುಕರ ಅಟ್ಟಹಾಸ; ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!

ಮೈಸೂರಲ್ಲಿ ಮತ್ತೆ ಕಾಮುಕರ ಅಟ್ಟಹಾಸ; ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!

- Advertisement -
- Advertisement -

ಮೈಸೂರು: ಮೈಸೂರಿನಲ್ಲಿ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದು, ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆ ಮಾಡಿದ ಘಟನೆ ಸ್ಟಡಿಹೌಸ್ ಬಳಿ ನಡೆದಿದೆ

ಸಂತ್ರಸ್ತ ಯುವತಿಯನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಟಡಿ ಹೌಸ್ ಒಳಗೆ ಪ್ರವೇಶಿಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆಗೈದು ಪರಾರಿಯಾಗಿದ್ದಾನೆಂದು ಹೇಳಲಾಗಿದೆ.

ಸ್ಟಡಿ ಹೌಸ್ ನಲ್ಲಿ ಆಂಧ್ರಪ್ರದೇಶದ 7 ಮಂದಿ ವಿದ್ಯಾರ್ಥಿನಿಯರು ಇದ್ದರು. ಘಟನೆ ನಡೆದ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ತರಗತಿಗೆ ಹೋಗಿದ್ದು, ವಿದ್ಯಾರ್ಥಿನಿ ಒಬ್ಬಳೇ ಇರುವುದನ್ನು ಗಮನಿಸಿ ಅತ್ಯಾಚಾರಕ್ಕೆ ಯತ್ನಿಸಿ ಚಾಕುವಿನಿಂದ ಕೈಗೆ ಇರಿದು ಪರಾರಿಯಾಗಿದ್ದಾನೆನ್ನಲಾಗಿದೆ. ಗಾಯಾಳು ವಿದ್ಯಾರ್ಥಿನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನರಸಿಂಹರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!