Wednesday, June 3, 2026
Homeಕರಾವಳಿಮಂಗಳೂರುಬಂಟ್ವಾಳ: ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿ ಸಾವು

ಬಂಟ್ವಾಳ: ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿ ಸಾವು

- Advertisement -
- Advertisement -

ಬಂಟ್ವಾಳ: ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ. ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಮೃತಪಟ್ಟ ವಿದ್ಯಾರ್ಥಿ.

ಲಿಖಿತ್ ರಜೆಯಲ್ಲಿ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗುತ್ತಿದ್ದ. ಮಂಗಳವಾರ ಸಂಜೆ ಸುಮಾರು 5.30 ರ ವೇಳೆಗೆ ಬಿಸಿರೋಡಿನಿಂದ ಮನೆ ಕಡೆಗೆ ಹೋಗುತ್ತಿದ್ದಾಗ ಪಾಣೆಮಂಗಳೂರು ಎಂಬಲ್ಲಿ ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಈತ ಚಿಕಿತ್ಸೆ ಗೆ ಸ್ಪಂದಿಸದೆ ಇಂದು ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರು ಟ್ರಾಫಿಕ್ ಪೋಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!