Tuesday, November 3, 2026
Homeಕರಾವಳಿಉಡುಪಿಟಿಪ್ಪರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕರಿಸದೇ ಸಾವು

ಟಿಪ್ಪರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕರಿಸದೇ ಸಾವು

- Advertisement -
- Advertisement -

ಕುಂದಾಪುರ: ಅ.30ರಂದು ಬಳ್ಳೂರಿನಲ್ಲಿ ಸಂಭವಿಸಿದ ಟಿಪ್ಪರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಟಿ.ಕೆ. (ಕಂಡೂರು) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ನ.2) ರಾತ್ರಿ ಮೃತಪಟ್ಟಿದ್ದಾರೆ.

ಘಟನೆಯ ವಿವರ: ಅಕ್ಟೋಬರ್ 30ರಂದು ಬೆಳಿಗ್ಗೆ ರಾಜ್ಯ ಹೆದ್ದಾರಿ 52ರ ಬಳ್ಕೂರು ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ವಿದ್ಯಾರ್ಥಿಗಳು ಚಲಿಸುತ್ತಿದ್ದ ಸ್ಕೂಟರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿತ್ತು. ಎರಡು ಟಿಪ್ಪರ್‌ಗಳ ನಡುವೆ ಉಂಟಾದ ಸಂಘರ್ಷದ ಬಳಿಕ ಈ ಅಪಘಾತ ಸಂಭವಿಸಿತ್ತು.

ಕಂಡ್ಲೂರಿನ ನಿವಾಸಿಯಾದ ಮೊಹಮ್ಮದ್ ಶಯಾನ್ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನು ಸ್ಕೂಟರ್‌ನಲ್ಲಿದ್ದ ಮತ್ತೊಬ್ಬ ಕಾಲೇಜು ವಿದ್ಯಾರ್ಥಿ ಮೊಹಮ್ಮದ್ ರಯಾನ್ ಅವರಿಗೂ ಗಾಯಗಳಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!