Thursday, May 2, 2024
Homeಕರಾವಳಿಮಂಗಳೂರು: ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟ ಕಾಲೇಜು ಆಡಳಿತ ಮಂಡಳಿಯೇ ಇತ್ಯರ್ಥ...

ಮಂಗಳೂರು: ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟ ಕಾಲೇಜು ಆಡಳಿತ ಮಂಡಳಿಯೇ ಇತ್ಯರ್ಥ ಪಡಿಸಬೇಕು: ಪ್ರೊ. ಯಡಪಡಿತ್ತಾಯ

spot_img
- Advertisement -
- Advertisement -

ಮಂಗಳೂರು: ಜಿಲ್ಲೆಯ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟ ಕಾಲೇಜು ಆಡಳಿತ ಮಂಡಳಿಯೇ ಇತ್ಯರ್ಥ ಪಡಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ತಿಳಿಸಿದ್ದಾರೆ.

ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯ ಸಂದರ್ಭ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಈ ಪ್ರತಿಕ್ರಿಯೆ ನೀಡಿದರು.

ಮಾತ್ರವಲ್ಲದೆ, ಇಂತಹ ಭಾವನಾತ್ಮಕ ವಿಚಾರಗಳಿಂದ ಕಾಲೇಜುಗಳಲ್ಲಿ ಕಲಿಕಾ ವಾತಾವರಣ ಕೆಡದಂತೆ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು. ಸಿಂಡಿಕೇಟ್ ಸದಸ್ಯರು, ನಗರದ ಕೆಲ ಪ್ರತಿಷ್ಠಿತ ಕಾಲೇಜುಗಳ ಪ್ರಾಂಶುಪಾಲರನ್ನು ಒಳಗೊಂಡ ಸಮಿತಿಯ ಸಲಹೆ ಸೂಚನೆಗಳನ್ನು ಆದರಿಸಿ ಕೆಲವೊಂದು ಮಾರ್ಗಸೂಚಿಗಳನ್ನು ರಚಿಸಿ ಅದನ್ನು ಸಿಂಡಿಕೇಟ್ ಸಭೆಯ ಒಪ್ಪಿಗೆ ಪಡೆದು ಎಲ್ಲಾ ಕಾಲೇಜುಗಳಿಗೆ ಕಳುಹಿಸಲಾಗುವುದು ಎಂದರು.

ಕಾಲೇಜು ಆಡಳಿತ ಮಂಡಳಿ ಇಂತಹ ಸಮಸ್ಯೆಗಳು ಎದುರಾದಾಗ ಅದು ಹೆಮ್ಮರವಾಗದಂತೆ ಎಚ್ಚರಿಕೆ ವಹಿಸಬೇಕು. ಆ ನಿಟ್ಟಿನಲ್ಲಿ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆಯನ್ನು ಕಳುಹಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಎಲ್ಲಾ ಕಡೆ ಜಾರಿಗೊಳಿಸಲು ಮಂಗಳೂರು ವಿಶ್ವವಿದ್ಯಾನಿಲಯ ಬದ್ಧವಾಗಿದೆ ಎಂದು ಅವರು ಹೇಳಿದರು. ಕುಲಸಚಿವರುಗಳಾದ ಪಿ.ಎಲ್. ಧರ್ಮ, ನಾರಾಯಣ, ಪ್ರೊ. ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!