Friday, June 5, 2026
Homeಕರಾವಳಿಕಾಸರಗೋಡು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಾಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

ಕಾಸರಗೋಡು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಾಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

- Advertisement -
- Advertisement -

ಕಾಸರಗೋಡು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಾಗೊಂಡಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಪುಲ್ಲೂರು ವಿಷ್ಣು ಮಂಗಲದ ಅಖಿಲ್ ರಾಜ್ (19) ಎಂದು ಗುರುತಿಸಲಾಗಿದೆ

ಇವರು ಪುಲ್ಲೂರು ಸ್ಥಳೀಯ ಎಸ್ಎಫ್ಐಐ ಸಮಿತಿ ಕಾರ್ಯದರ್ಶಿಯು ಕೂಡ ಆಗಿದ್ದರು. ಸದ್ಯ ಐ ಟಿ ಐ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದರು ಎಂಬ ಮಾಹಿತಿ ದೊರಕಿದೆ. ಒಂದು ವಾರದ ಹಿಂದೆ ಜಿಲ್ಲಾಸ್ಪತ್ರೆಯ ಸಮೀಪ ಅಖಿಲ್ ರಾಜ್ ಹಾಗೂ ಸ್ನೇಹಿತರು ಸಂಚರಿಸುತ್ತಿದ್ದ ಕಾರು ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅಖಿಲ್ ರಾಜ್‌ನನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!