Thursday, June 4, 2026
Homeತಾಜಾ ಸುದ್ದಿಮನೆ ಕಟ್ಟಲು ನಿವೇಶ‌ನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಶಾಲಾ ಬಾಲಕಿ

ಮನೆ ಕಟ್ಟಲು ನಿವೇಶ‌ನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಶಾಲಾ ಬಾಲಕಿ

- Advertisement -
- Advertisement -

ತುಮಕೂರು: ಮನೆ ಕಟ್ಟಲು ನಿವೇಶನ ಇಲ್ಲದ ಕಾರಣ
ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರ ಬರೆದಿದ್ದಾಳೆ.‌

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೂಯಲಹಳ್ಳಿಯ ವಿದ್ಯಾರ್ಥಿನಿ ಲಕ್ಷ್ಮೀ ಮನೆ ಕಟ್ಟಲು ನಿವೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾಳೆ.

ಲಕ್ಷ್ಮಿ ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದು,
ಜೂನ್ 29 ರಂದು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾಳೆ.

ನಾನು ತಂದೆ ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದು, ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲಿನಲ್ಲಿ ವಾಸಿಸುವುದು ಅನಿವಾರ್ಯವಾಗಿದ್ದು ಆತಂಕದಲ್ಲಿ ಕಾಲ ಕಳೆಯುತ್ತಿದ್ದೇವೆ. ಮನೆ ಕಟ್ಟಲು ಗ್ರಾಮ ಪಂಚಾಯತ್ ಅನುದಾನ ಬಿಡುಗಡೆ ಮಾಡಿದರೂ ಮನೆ ಕಟ್ಟುವುದಕ್ಕೆ ಸಾಧ್ಯವಾಗುತ್ತಿಲ್ಲ. ದಯಮಾಡಿ ಮನೆ ಕಟ್ಟಿಕೊಳ್ಳಲು ನಿವೇಶನ ಕೊಡಿ ಎಂದು ಲಕ್ಷ್ಮೀ ಪತ್ರ ಬರೆದಿದ್ದಾಳೆ.

ರಾಷ್ಟ್ರಪತಿಗಳಿಗೆ ಪತ್ರ ಬರೆದ ಬಾಲಕಿ ಲಕ್ಷ್ಮೀ ಯನ್ನು ಭೇಟಿ ಮಾಡಿ ತಹಶೀಲ್ದಾರ್ ಅಹವಾಲು ಆಲಿಸಿದ್ದಾರೆ.‌

- Advertisement -

Latest News

error: Content is protected !!