Wednesday, June 24, 2026
Homeಕೊಡಗುಮಡಿಕೇರಿ: ವಸತಿ ಶಾಲೆಯಲ್ಲಿ ಅಗ್ನಿ ಅನಾಹುತ ಸಂಭವಿಸಿ ವಿದ್ಯಾರ್ಥಿ ಜೀವಂತ ದಹನ

ಮಡಿಕೇರಿ: ವಸತಿ ಶಾಲೆಯಲ್ಲಿ ಅಗ್ನಿ ಅನಾಹುತ ಸಂಭವಿಸಿ ವಿದ್ಯಾರ್ಥಿ ಜೀವಂತ ದಹನ

- Advertisement -
- Advertisement -

ಮಡಿಕೇರಿ: ವಸತಿ ಶಾಲೆಯಲ್ಲಿ ಬೆಂಕಿ ದುರಂತ ಸಂಭವಿಸಿ
ಒಬ್ಬ ವಿದ್ಯಾರ್ಥಿ ಜೀವಂತವಾಗಿ ದಹನವಾಗಿರುವ ದಾರುಣ ಘಟನೆ ಮಡಿಕೇರಿ ತಾಲೂಕಿನ ಕಾಟಕೇರಿಯಲ್ಲಿ ನಡೆದಿದೆ.

ದೆಹಲಿ ಮೂಲದ ಸಂಸ್ಥೆಗೆ ಸೇರಿದ ಹರಿಮಂದಿರ ವಸತಿ ಶಾಲೆಯಲ್ಲಿ ದುರ್ಘಟನೆ ಸಂಭವಿಸಿದ್ದು, ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅನಾಹುತ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ‌ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಗ್ನಿ ಅವಘಡದ ಹಿನ್ನೆಲೆಯಲ್ಲಿ 51 ಮಕ್ಕಳಿಗೆ ಸ್ಥಳೀಯ ಹೋ‌ಂ ಸ್ಟೇಯಲ್ಲಿ ಆಶ್ರಯ ಕಲ್ಪಿಸಲಾಗಿದ್ದು, ಲಘು ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!