Thursday, June 4, 2026
Homeತಾಜಾ ಸುದ್ದಿದಾವಣಗೆರೆಯಲ್ಲಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಬ್ಬರ ಖಾಸಗಿ ಕ್ಷಣದ ವಿಡಿಯೋ ವೈರಲ್ ಪ್ರಕರಣ; ವಿಡಿಯೊ ವೈರಲ್ ನಿಂದ ಮನನೊಂದು...

ದಾವಣಗೆರೆಯಲ್ಲಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಬ್ಬರ ಖಾಸಗಿ ಕ್ಷಣದ ವಿಡಿಯೋ ವೈರಲ್ ಪ್ರಕರಣ; ವಿಡಿಯೊ ವೈರಲ್ ನಿಂದ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ

- Advertisement -
- Advertisement -

ದಾವಣಗೆರೆಯಲ್ಲಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಬ್ಬರು ಲಿಪ್ ಲಾಕ್ ಮಾಡಿರುವ  ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆಗುತ್ತಿತ್ತಂತೆ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆಯ  ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇರುವ ವಿಡಿಯೊ ವೈರಲ್ ಆಗಿತ್ತುಖಾಸಗಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಮನನೊಂದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ವಿದ್ಯಾರ್ಥಿ ರತನ್ (20) ನಿನ್ನೆ ರಾತ್ರಿ ಹಾಸ್ಟೆಲ್‌ ಸಮೀಪದಲ್ಲಿದ್ದ ಮರಕ್ಕೆ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇಬ್ಬರು ಬಿ.ಕಾಂ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮಕ್ಕಳ ವಿಡಿಯೊ ವೈರಲ್‌ ಮಾಡಿದವರ ವಿರುದ್ಧ ಪೋಷಕರು ಪ್ರತ್ಯೇಕ ದೂರು ದಾಖಲು ಮಾಡಿದ್ದಾರೆ.

- Advertisement -

Latest News

error: Content is protected !!