Friday, June 5, 2026
Homeತಾಜಾ ಸುದ್ದಿಬೆಳ್ತಂಗಡಿ: ವಾಣಿ ಪದವಿ ಪೂರ್ವಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೈಬರಹ ಭಿತ್ತಿಪತ್ರಿಕೆ ಅಕ್ಷರವಾಣಿ ಅನಾವರಣ

ಬೆಳ್ತಂಗಡಿ: ವಾಣಿ ಪದವಿ ಪೂರ್ವಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೈಬರಹ ಭಿತ್ತಿಪತ್ರಿಕೆ ಅಕ್ಷರವಾಣಿ ಅನಾವರಣ

- Advertisement -
- Advertisement -

ಬೆಳ್ತಂಗಡಿ: ವಿದ್ಯಾರ್ಥಿಗಳ ಸೂಕ್ತ ಪ್ರತಿಭೆಗಳಿಗೆ ಅವಕಾಶಗಳನ್ನು ನೀಡಿ ಸೃಜನಶೀಲರನ್ನಾಗಿಸುವುದು ಶಿಕ್ಷಣ ಸಂಸ್ಥೆಗಳ ಧ್ಯೇಯವಾಗಿರಬೇಕು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಚೈತ್ರೇಶ್ ಇಳಂತಿಲ ಹೇಳಿದರು. ವಾಣಿ ಪದವಿ ಪೂರ್ವಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೈಬರಹ ಭಿತ್ತಿಪತ್ರಿಕೆ ಅಕ್ಷರವಾಣಿಯನ್ನು ಅನಾವರಣಗೊಳಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಿಚಾರಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುತ್ತದೆ. ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಹೆಚ್ಚು ಅವಕಾಶ ಕೊಡುವ ಅಂಶಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯವಿಚಾರದೊಂದಿಗೆ ತಮ್ಮ ಪ್ರತಿಭೆ ಪ್ರದರ್ಶನಕ್ಕೆ ಅನೇಕ ವೇದಿಕೆ ಸೃಷ್ಟಿಸಿಕೊಳ್ಳಲಾಗಿದೆ. ತಮ್ಮ ಕೌಶಲ್ಯ ವೃದ್ಧಿಗಾಗಿ ಪತ್ರಿಕೆ ಸಹಿತ ಪುಸ್ತಕಗಳ ಓದಿನೆಡೆಗೆ ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದರು.

ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಉಪಸ್ಥಿತರಿದ್ದರು. ಅಕ್ಷರವಾಣಿ ಭಿತ್ತಿಪತ್ರಿಕೆಯ ಸಂಯೋಜಕಿ ಶ್ರೀಮತಿ ಮೀನಾಕ್ಷಿ ಸ್ವಾಗತಿಸಿದರು. ಸೌಜನ್ಯ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

- Advertisement -

Latest News

error: Content is protected !!