Monday, April 29, 2024
Homeಕರಾವಳಿಮಂಗಳೂರು; ಹಾಸ್ಟೆಲ್ ನಲ್ಲಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಮಂಗಳೂರು; ಹಾಸ್ಟೆಲ್ ನಲ್ಲಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

spot_img
- Advertisement -
- Advertisement -

ಮಂಗಳೂರು; ಹಾಸ್ಟೆಲ್ ನಲ್ಲಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಂಗಳೂರು ಹೊರವಲಯದ ವಲಚ್ಚಿಲ್ ಬಳಿಯ ಶ್ರೀನಿವಾಸ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಹಾಸ್ಟೆಲ್ ನಲ್ಲಿ ಊಟ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.


ನಿನ್ನೆ ರಾತ್ರಿ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್​ನಲ್ಲಿ  ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡಿದೆ.ಕೂಡಲೇ ಮಂಗಳೂರು ಮತ್ತು ತುಂಬೆಯ ಆಸ್ಪತ್ರೆಗಳಿಗೆ‌ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಫೆ. 7ರ ಬುಧವಾರ ರಾತ್ರಿ ವೇಳೆ ಕೆಲ‌ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್ ಗೆ ತೆರಳಿ ಪರಿಶೀಲನೆ ನಡೆಸಿದ್ದೇವೆ ಎಂದು‌ ಆರೋಗ್ಯ ಇಲಾಖೆ‌ ಅಧಿಕಾರಿಗಳು ತಿಳಿಸಿದ್ದಾರೆ.ಬಹುತೇಕರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!