Friday, May 3, 2024
Homeತಾಜಾ ಸುದ್ದಿತರಗತಿ ನಡೆಯುತ್ತಿರುವಾಗಲೇ ಕುಸಿದು ಬಿದ್ದ ಮೇಲ್ಛಾವಣಿ: ಮೂವರು ವಿದ್ಯಾರ್ಥಿಗಳಿಗೆ ಗಾಯ

ತರಗತಿ ನಡೆಯುತ್ತಿರುವಾಗಲೇ ಕುಸಿದು ಬಿದ್ದ ಮೇಲ್ಛಾವಣಿ: ಮೂವರು ವಿದ್ಯಾರ್ಥಿಗಳಿಗೆ ಗಾಯ

spot_img
- Advertisement -
- Advertisement -

ಮೈಸೂರು: ತರಗತಿಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾಗಲೇ ಚಾವಣಿ ಕುಸಿದು ಮೂವರು ಗಾಯಗೊಂಡಿರುವ ಘಟನೆ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ನಡೆದಿದೆ.

ಇಲ್ಲಿನ ನ್ಯಾಯ ವಿಜ್ಞಾನ ಮತ್ತು ಅಪರಾಧ ಶಾಸ್ತ್ರ ವಿಭಾಗದಲ್ಲಿ ಪಾಠ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ವಿಶಾಲ್‌, ಸಲೀಂ ಪಾಶಾ, ಯಶ್ವಂತ್‌ ಎಂದು ಗುರುತಿಸಲಾಗಿದೆ.

ವಿಶಾಲ್‌ ತಲೆಯ ಭಾಗಕ್ಕೆ ಏಟಾಗಿದ್ದು, ಉಳಿದ ಇಬ್ಬರು ವಿದ್ಯಾರ್ಥಿಗಳಿಗೆ ಕೈ, ಕಾಲಿನ ಮೇಲೆ ತರಚಿದ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪಾಠ ನಡೆಯುತ್ತಿದ್ದ ವೇಳೆ ತರಗತಿಯಲ್ಲಿ 24 ಮಂದಿ ವಿದ್ಯಾರ್ಥಿಗಳಿದ್ದರು. ಚಾವಣಿಯ ಒಂದು ಭಾಗದ ಸುಮಾರು ಮೂರು ಅಡಿಯ ಗಾರೆಯು ಕುಸಿದು ವಿದ್ಯಾರ್ಥಿಗಳ ಮೇಲೆ ಬಿದ್ದಿದೆ.

ತಕ್ಷಣವೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಕಾಮಾಕ್ಷಿ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!