Thursday, June 4, 2026
Homeಕರಾವಳಿಸುಳ್ಯ; ವಿದ್ಯಾರ್ಥಿ ವಿರುದ್ಧ ಉಪನ್ಯಾಸಕಿ ಸುಳ್ಳು ದೂರು ನೀಡಿದ ಆರೋಪ; ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಧರಣಿ

ಸುಳ್ಯ; ವಿದ್ಯಾರ್ಥಿ ವಿರುದ್ಧ ಉಪನ್ಯಾಸಕಿ ಸುಳ್ಳು ದೂರು ನೀಡಿದ ಆರೋಪ; ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಧರಣಿ

- Advertisement -
- Advertisement -

ಸುಳ್ಯ; ವಿದ್ಯಾರ್ಥಿ ವಿರುದ್ಧ ಉಪನ್ಯಾಸಕಿ ಸುಳ್ಳು ದೂರು ನೀಡಿದ್ದಾರೆ ಎಂದು ಆರೋಪಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳು ಧರಣಿ ನಡೆಸಿದ ಘಟನೆ ಪೆರುವಾಜೆ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುನಿತಾ ಎಂಬವರು ಎಂ.ಕಾಂ. ವಿದ್ಯಾರ್ಥಿ ದೀಕ್ಷಿತ್ ಎಂಬಾತನ ವಿರುದ್ಧ ಪೊಲೀಸ್ ಠಾಣೆಗೆ ಸುಳ್ಳು ದೂರು ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.  ಈ ಹಿನ್ನೆಲೆ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜು ಪ್ರವೇಶ ದ್ವಾರದ ಬಳಿ ಧರಣಿ ನಡೆಸಿ ಉಪನ್ಯಾಸಕಿ ವಿರುದ್ಧ ಘೋಷಣೆ ಕೂಗಿ, ಮೇಲಾಧಿಕಾರಿಗಳು ಬರುವಂತೆ ಪಟ್ಟು ಹಿಡಿದರು. ಮೇಲಾಧಿಕಾರಿಗಳು ಬಂದು ಕ್ರಮ ಕೈಗೊಳ್ಳುವ ವರೆಗೆ ಅನಿರ್ದಿಷ್ಟಾವಧಿ ಧರಣಿ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿಗಳು ಕಾಲೇಜು ಪ್ರಾಂಶುಪಾಲರಿಗೂ ಮನವಿ ಸಲ್ಲಿಸಿದ್ದಾರೆ ಎಂದು ವಿದ್ಯಾರ್ಥಿ ಪ್ರಮುಖರು ತಿಳಿಸಿದ್ದಾರೆ. ಕೆಲ ವಿದ್ಯಾರ್ಥಿಗಳು ತರಗತಿ ಪರೀಕ್ಷೆಯನ್ನೂ ಬಹಿಷ್ಕರಿಸಿ ಧರಣಿಯಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!