Thursday, June 4, 2026
Homeಕರಾವಳಿಮಂಗಳೂರು:ತಣ್ಣೀರುಬಾವಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ ಮೂಡಬಿದರೆ ಕಾಲೇಜಿನ ವಿದ್ಯಾರ್ಥಿಗಳು

ಮಂಗಳೂರು:ತಣ್ಣೀರುಬಾವಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ ಮೂಡಬಿದರೆ ಕಾಲೇಜಿನ ವಿದ್ಯಾರ್ಥಿಗಳು

- Advertisement -
- Advertisement -

ಮಂಗಳೂರು: ತಣ್ಣೀರು ಬಾವಿ‌ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ ಮೂಡಬಿದರೆ ಕಾಲೇಜಿನ ಐವರು ವಿದ್ಯಾರ್ಥಿಗಳನ್ನು ಸಮಯ ಪ್ರಜ್ಞೆಯಿಂದ ರಕ್ಷಿಸಲಾಗಿದೆ.

ಮೂಡಬಿದಿರೆ ಆಳ್ವಾಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ತಣ್ಣೀರು ಬಾವಿ ಬೀಚ್ ಗೆ ಬಂದಿದ್ದರು. ಈಜುವ ವೇಳೆ ಅಲೆಯ ರಭಸ ಹೆಚ್ಚಳದಿಂದಾಗಿ ಅಪಾಯ ಎದುರಾಗುತ್ತು. ಈ ವೇಳೆ ಸ್ಥಳದಲ್ಲಿದ್ದ ರಾಷ್ಟ್ರೀಯ ಈಜುಪಟುಗಳಾದ ಸಂಕೇತ್‌ ಬೆಂಗ್ರೆ, ಶಿಲ್ಪಾ ಬೆಂಗ್ರೆ ಇಬ್ಬರನ್ನು ರಕ್ಷಿಸಿದ್ದಾರೆ. ಇನ್ನುಳಿದ ಮೂವರು ಕೂಗಾಡುವಾಗ ತೇಜಸ್‌ ಮತ್ತು ಇತರ ಸರ್ಫ್‌ ತರಬೇತುದಾರರು ಸ್ಥಳಕ್ಕೆ ಧಾವಿಸಿ ಅವರನ್ನು ಸರ್ಫ್‌ ಬೋರ್ಡ್‌ ಮೂಲಕ ದಡಕ್ಕೆ ಕರೆತಂದಿದ್ದಾರೆ. ಬಳಿಕ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಿಕೊಟ್ಟಿದ್ದಾರೆ.

ಸಂಕೇತ್‌ ಬೆಂಗ್ರೆ, ಶಿಲ್ಪಾ ಬೆಂಗ್ರೆ ಅದೇ ರೀತಿ ತೇಜಸ್ ಮತ್ತು‌ ಸರ್ಪ್‌ ಬೋರ್ಡ್ ಕಾರ್ಯಕ್ಷಮತೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.

- Advertisement -

Latest News

error: Content is protected !!