Wednesday, June 3, 2026
Homeತಾಜಾ ಸುದ್ದಿಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕ್ರಮಕೈಗೊಳ್ಳಲಾಗುವುದು: ಸಚಿವ ಕೆ ಸುಧಾಕರ್

ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕ್ರಮಕೈಗೊಳ್ಳಲಾಗುವುದು: ಸಚಿವ ಕೆ ಸುಧಾಕರ್

- Advertisement -
- Advertisement -

ಬೆಂಗಳೂರು: ಕರ್ನಾಟಕ ಆರೋಗ್ಯ ಸಚಿವ ಕೆ. ಸುಧಾಕರ್ ಸೋಮವಾರ ಮಾತನಾಡಿ, ಯುದ್ಧ ಪೀಡಿತ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಮುಂದಿನ ಶಿಕ್ಷಣದ ಕುರಿತು ಸರ್ಕಾರವು ಚರ್ಚಿಸುತ್ತಿದೆ ಎಂದರು.

ಉಕ್ರೇನ್‌ನಿಂದ ವಾಪಸ್ಸಾದ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಮುಂದುವರಿಸಲು ಕ್ರಮಕೈಗೊಳ್ಳಲಾಗುವುದು. ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ಕಡಿಮೆ ಮಾಡುವ ಬಗ್ಗೆ ನಾವು ಚರ್ಚಿಸುತ್ತಿದ್ದೇವೆ ಎಂದು ಸುಧಾಕರ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

ಉಕ್ರೇನ್‌ನ ಖಾರ್ಕಿವ್‌ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ರಾಜ್ಯದ ವಿದ್ಯಾರ್ಥಿ ನವೀನ್ ಶೇಖರಪ್ಪ ಜ್ಞಾನಗೌಡರ ಸಾವು ಬೇಸರ ತಂದಿದೆ, ದೇಶದ 22,000 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದರು. ಅವರೆಲ್ಲರನ್ನೂ ಸುರಕ್ಷಿತವಾಗಿ ಕರೆತರಲಾಗಿದೆ ಎಂದರು.

- Advertisement -

Latest News

error: Content is protected !!