Thursday, June 4, 2026
Homeಕರಾವಳಿಮಂಗಳೂರು:ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ವಿದ್ಯಾರ್ಥಿಗಳು ಸಸ್ಪೆಂಡ್

ಮಂಗಳೂರು:ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ವಿದ್ಯಾರ್ಥಿಗಳು ಸಸ್ಪೆಂಡ್

- Advertisement -
- Advertisement -

ಮಂಗಳೂರು: ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ನಾಲ್ವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದ ಘಟನೆ ವಾಮಂಜೂರಿನಖಾ ಸಗಿ ಕಾಲೇಜಿನಲ್ಲಿ ನಡೆದಿದೆ.

ವಿದ್ಯಾರ್ಥಿಗಳ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಡ್ಯಾನ್ಸ್ ಮಾಡಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿ ಕಾಲೇಡು ಆಡಳಿತ ಮಂಡಳಿ ಆದೇಶ ಹೊರಡಿಸಿದೆ.


ಬುರ್ಖಾ ಧರಿಸಿ ವಿದ್ಯಾರ್ಥಿಗಳು ನೃತ್ಯ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲೀಂ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವಿಧ್ಯಾರ್ಥಿಗಳೇ ಬುರ್ಖಾ ಧರಿಸಿ ನೃತ್ಯ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.

ಅಲ್ಲದೆ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದೆ. ಕಾರ್ಯಕ್ರಮದ ಪ್ರಾರಂಭದಲ್ಲಿ ವಿಧ್ಯಾರ್ಥಿಗಳು ಅನುಮತಿ ಇಲ್ಲದೆ ಈ ನೃತ್ಯ ಪ್ರದರ್ಶಿಸಿದ್ದಾರೆ ಎಂದು ಕಾಲೇಜು ಮಂಡಳಿ ಹೇಳಿದೆ. ಶಾಲೆ ಕೋಮು ಸೌಹಾರ್ಧತೆ ಕದಡುವ ಯಾವುದೇ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.

- Advertisement -

Latest News

error: Content is protected !!