Tuesday, June 23, 2026
Homeತಾಜಾ ಸುದ್ದಿಸಿಇಟಿ ಬರೆದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಅಂಕ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ

ಸಿಇಟಿ ಬರೆದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಅಂಕ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ

- Advertisement -
- Advertisement -

ಬೆಂಗಳೂರು : ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮೇ 31 ರೊಳಗೆ ದ್ವಿತೀಯ ಪಿಯುಸಿ ಅಂಕ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ.

2023 ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾದ ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಿಬಿಎಸ್ಸಿ, ಐಸಿಎಸ್ ಸಿ ಸೇರಿ ಇನ್ನಿತರ ಮಂಡಳಿಗಳ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ (ದ್ವಿತೀಯ ಪಿಯುಸಿ) ಅಂಕ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ.

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಸಿಇಟಿ ಅಂಕಗಳು ಹಾಗೂ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ರ್ಯಾಂಕಿಂಗ್ ನೀಡಲಾಗುವುದು. ಈ ಹಿನ್ನೆಲೆ ಅಂಕಗಳನ್ನು ಮೇ 31 ರೊಳಗೆ ಆನ್ ಲೈನ್ ನಲ್ಲಿ ದಾಖಲಿಸಲು ಸೂಚನೆ ನೀಡಿದೆ. 2023 ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾದ ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳ ಅಂಕಗಳನ್ನು ನೇರವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪಡೆದುಕೊಳ್ಳಲಾಗುತ್ತದೆ.

- Advertisement -

Latest News

error: Content is protected !!