Thursday, May 16, 2024
HomeUncategorizedಮಾರ್ಚ್ ಅಂತ್ಯದವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಣೆ

ಮಾರ್ಚ್ ಅಂತ್ಯದವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಣೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳ ಕೆಲಸದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.‌ ಮಾರ್ಚ್ ತಿಂಗಳ ಅಂತ್ಯದವರೆಗೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಲಾಗಿದೆ.

ತಕ್ಷಣದಿಂದಲೇ ಜಾರಿಯಾಗುವಂತೆ ತಾತ್ಕಾಲಿಕ ವಿಸ್ತರಣೆ ಮಾಡಿ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಅಲ್ಲದೇ ಮಾರ್ಚ್ ತಿಂಗಳ ಎಲ್ಲಾ ಶನಿವಾರದಂದು ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳು ಕಾರ್ಯ ನಿರ್ವಹಣೆ ಮಾಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಮಾರ್ಚ್ ಅಂತ್ಯದವರೆಗೆ ಈ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಬಹುದಾಗಿದೆ.

ಅಲ್ಲದೇ ರಾಜ್ಯದ ಎಲ್ಲಾ ವಿಧದ ಸ್ಥಿರಾಸ್ತಿಗಳಾದ ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ ಕಟ್ಟಡ, ಅಪಾರ್ಟ್ಮೆಂಟ್/ ಫ್ಲ್ಯಾಟ್, ಮತ್ತು ಇತರೆ ಸ್ವತ್ತುಗಳ ನೋಂದಣಿಗೆ ಜಾರಿಯಲ್ಲಿರುವ ಮಾರ್ಗಸೂಚಿ ದರಗಳನ್ನು ಶೇಕಡಾ 10 ರಷ್ಟು ಕಡಿತಗೊಳಿಸಲಾಗಿದೆ. ಮಾರ್ಚ್ 31 ರವರೆಗೆ ಈ ಅವಕಾಶ ಜಾರಿಯಲ್ಲಿರಲಿದೆ.

- Advertisement -
spot_img

Latest News

error: Content is protected !!