- Advertisement -
![]()
- Advertisement -
ಸುಬ್ರಹ್ಮಣ್ಯ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯೇನೆಕಲ್ಲು ಗ್ರಾಮದ ಬಾನಡ್ಕ ಎಂಬಲ್ಲಿ ನಡೆದಿದೆ. ಮನೋಜ್ (42) ಮೃತರು.
ಮನೋಜ್ ಅವರು ಕಳೆದ ಕೆಲವು ಸಮಯದಿಂದ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ.
ಮೃತರು ತಾಯಿ, ಪತ್ನಿ, ಇಬ್ಬರು ಚಿಕ್ಕ ಮಕ್ಕಳು, ಇಬ್ಬರು ಸಹೋದರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
- Advertisement -


