Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಧರ್ಮಸ್ಥಳಕ್ಕೆ ಭೇಟಿ ನೀಡಿದ ಸುಬ್ರಹ್ಮಣ್ಯ ಸ್ವಾಮೀಜಿ

ಬೆಳ್ತಂಗಡಿ : ಧರ್ಮಸ್ಥಳಕ್ಕೆ ಭೇಟಿ ನೀಡಿದ ಸುಬ್ರಹ್ಮಣ್ಯ ಸ್ವಾಮೀಜಿ

- Advertisement -
- Advertisement -

ಬೆಳ್ತಂಗಡಿ : ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಸೆ.16 ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಿ ಗೌರವಿಸಲಾಯಿತು.

ಉಜಿರೆ: ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರಿಗೆ ಮಾಲಾರ್ಪಣೆ ಮಾಡಿ, ಶಾಲು ಹೊದಿಸಿ, ಫಲಕಾಣಿಕೆ ನೀಡಿ ಗೌರವಿಸಿದರು. ಸ್ವಾಮೀಜಿಯವರು ಹೆಗ್ಗಡೆಯವರಿಗೆ ಸುಬ್ರಹ್ಮಣ್ಯದ ಪ್ರಸಾದ ನೀಡಿ ಶುಭ ಹಾರೈಸಿದರು. ಹೇಮಾವತಿ ವಿ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.ಪೂಜ್ಯ ಸ್ವಾಮೀಜಿಯವರು ದೇವರ ದರ್ಶನದ ಬಳಿಕ ಸುಬ್ರಹಣ್ಯಕ್ಕೆ ಮರುಪ್ರಯಾಣ ಮಾಡಿದರು.

- Advertisement -

Latest News

error: Content is protected !!