- Advertisement -
![]()
- Advertisement -
ಬೆಂಗಳೂರು: ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಹೃದಯ ಬಡಿತದ ಸಮಸ್ಯೆಗೆ ಒಳಗಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಶಾಶ್ವತ ಪೇಸ್ ಮೇಕರ್ ಅಳವಡಿಸಲಾಗಿದೆ.
ಜಯದೇವ ಹೃದಯ ವಿಜ್ಞಾನಗಳ ಸಂಸ್ಥೆಯ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಜಯದೇವ ನಿರ್ದೇಶಕ ಡಾ. ದಿನೇಶ್ ಈ ವೇಳೆ ಉಪಸ್ಥಿತರಿದ್ದರು. ಸದ್ಯ ಆಸ್ಪತ್ರೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿಶ್ರಾಂತಿ ಪಡೆಯುತ್ತಿದ್ದು, ಎರಡು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆ ಇದೆ.ನಿನ್ನೆ ರಾತ್ರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಚಿಕಿತ್ಸೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
- Advertisement -


