Sunday, June 7, 2026
Homeಕರಾವಳಿಮಂಗಳೂರು ವಿವಿ ವಿರುದ್ಧ ದಿಢೀರ್ ಪ್ರತಿಭಟನೆ

ಮಂಗಳೂರು ವಿವಿ ವಿರುದ್ಧ ದಿಢೀರ್ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ದಿಢೀರ್ ಪ್ರತಿಭಟನೆ ನಡೆದಿದೆ.‌
ಹಿಜಾಬ್ ಹೈಕೋರ್ಟ್ ತೀರ್ಪು ವಿರೋಧಿಸಿ
ಮಂಗಳೂರಿನ ಕ್ಲಾಕ್ ಟವರ್ ಸರ್ಕಲ್ ಬಳಿ ಪ್ರತಿಭಟನೆ‌ ನಡೆದಿದೆ.

ಮಂಗಳೂರು ವಿವಿ ಸಮನ್ವಯ ಸಮಿತಿ ಹೆಸರಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನೆಯಲ್ಲಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು‌.‌ ಪೊಲೀಸ್ ಅನುಮತಿ ಪಡೆದು ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲಾಗಿದೆ.

ರಸ್ತೆಗೆ ಅಡ್ಡಲಾಗಿ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರು ತಡೆದಾಗ ಪೊಲೀಸರು ಮತ್ತು ಪ್ರತಿಭಟನಾಕಾರ ಮಧ್ಯೆ ವಾಗ್ವಾದ ನಡೆದಿದೆ. ರಸ್ತೆ ಮಧ್ಯೆ ಪ್ರತಿಭಟನೆಗೆ ಅವಕಾಶ ಕೊಡದ ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ರಸ್ತೆಯಲ್ಲೇ ವಿದ್ಯಾರ್ಥಿನಿಯರು ಕುಳಿತಿದ್ದರು.

ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಪಾಲಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯ ತನ್ನ ವ್ಯಾಪ್ತಿಗೆ ಬರುವ 212 ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿತ್ತು. ಈ ಸುತ್ತೋಲೆ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ.

- Advertisement -

Latest News

error: Content is protected !!