Wednesday, June 26, 2024
Homeತಾಜಾ ಸುದ್ದಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ

 ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ

spot_img
- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಕಿಚ್ಚ ಸುದೀಪ್ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ.

ಇಂದು ಚಿತ್ರರಂಗದಿಂದ ದರ್ಶನ್ ಅವರನ್ನು ಬ್ಯಾನ್ ಮಾಡ್ಬೇಕು ಅನ್ನೋ ಆಗ್ರಹ ಕೇಳಿ ಬರುತ್ತಿದೆ. ಈ ಬಗ್ಗೆ ಇಂದು ಮಾಧ್ಯಮವರು ಸುದೀಪ್ ಅವರನ್ನು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ನಟ ದರ್ಶನ್ ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುವುದಕ್ಕಿಂತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತ ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ಪೊಲೀಸರು ಕ್ರಮವಹಿಸಬೇಕು. ಕನ್ನಡ ಚಿತ್ರರಂಗದವರು ಕೆಲಸ ಮಾಡಬೇಕು ಎಂದರು.

ಇದೇ ವೇಳೆ ಮಾತನಾಡಿದ ಅವರು ಮೃತ ಕುಟುಂಬಕ್ಕೆ ನ್ಯಾಯಸಿಗಬೇಕು. ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಾಗಿರುವಂತ ರೇಣುಕಾಸ್ವಾಮಿ ಕೊಲೆಯಾಗಿದೆ. ನ್ಯಾಯ ದೊರಕಿಸಿ ಕೊಡುವಂತ ಕೆಲಸವನ್ನು ಫಿಲ್ಮಂ ಛೇಂಬರ್ ಮಾಡಬೇಕು. ಸ್ನೇಹಿತ ಇರಲೇ ಯಾರೇ ಇರಲಿ ಚಿತ್ರರಂಗಕ್ಕೆ ಕಪ್ಪು ಚುಕ್ಕೆ ತರಬಾರದು. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತ ಕೆಲಸವಾಗಬೇಕು ಎಂದರು.

ಸತ್ಯ ಹೊರ ತರಲು ಮಾಧ್ಯಮದವರು, ಪೊಲೀಸರು ಬಹಳಷ್ಟು ಪ್ರಯತ್ನಿಸಿದ್ದಾರೆ. ರೇಣುಕಾಸ್ವಾಮಿ ಪತ್ನಿಗೆ ನ್ಯಾಯಸಿಗಬೇಕು. ನಟ ದರ್ಶನ್ ಅವರನ್ನು ಆರೋಪ ಮುಕ್ತರಾದ ಬಳಿಕ ಚಿತ್ರರಂಗದಿಂದ ಬ್ಯಾನ್ ಮಾಡಲು ಆಗುತ್ತಾ ಅಂತ ಪ್ರಶ್ನಿಸಿದ್ದಾಪರೆ.

- Advertisement -
spot_img

Latest News

error: Content is protected !!